ಮೂಡುಬಿದಿರೆ: ಎಡಪದವಿನಿಂದ ಮೂಡುಬಿದಿರೆ ಸಮೀಪದ ನೀರ್ಕೇರೆಗೆ ಬರುತ್ತಿದ್ದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.

ಎಡಪದವಿನಿಂದ ಮಗು ತೊಟ್ಟಿಲು ಶಾಸ್ತ್ರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಆರು ಮಂದಿ ಪ್ರಯಾಣಿಕರು ಹಾಗೂ ಆಟೋ ಚಾಲಕ ಒಂದೇ ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನೀರ್ಕೇರೆಯ ನಾಪಾಡಿ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ಪಲ್ಟಿಯಾಗಿದೆ.

ಅಪಘಾತದಲ್ಲಿ ಆಟೋ ಚಾಲಕ ಹಾಗೂ ಕೆಲವು ಹಿರಿಯ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋದಲ್ಲಿದ್ದ ಮಕ್ಕಳು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.