ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

2025–2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಗೂ 2025ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಅಧಿಕ ಅಂಕಗಳನ್ನು ಪಡೆದ ಸಂಘದ ಸದಸ್ಯರ ಮಕ್ಕಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ವಿದ್ಯಾರ್ಥಿ ವೇತನದ ಅರ್ಜಿಗಳು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಆಸಕ್ತ ವಿದ್ಯಾರ್ಥಿಗಳು ಜುಲೈ 15ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.