ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಪಂಚಮಿ ಆರ್ ಶೆಟ್ಟಿ ಅವರು ಪಿಯು ಪರೀಕ್ಷೆಯಲ್ಲಿ ಶೇ. 97.5 ಅಂಕಗಳನ್ನು ಪಡೆದು ಸಾಧನೆಗೈದಿದ್ದಾರೆ. ಈಕೆ ಮೂಡುಬಿದಿರೆ ಸುಜಾತ ಎಲೆಕ್ಟ್ರಿಕಲ್ಸ್ ಮಾಲಕ ರವಿಪ್ರಸಾದ್ ಶೆಟ್ಟಿ ಮತ್ತು ಸುಜಾತ ಆರ್ ಶೆಟ್ಟಿ ದಂಪತಿಯ ಪುತ್ರಿ. ಪಂಚಮಿ ಅವರು ಸ್ಟ್ಯಾಟಿಸ್ಟಿಕ್ಸ್ ವಿಷಯದಲ್ಲಿ 99 ಅಂಕ, ಅಕೌಂಟೆನ್ಸಿ ಮತ್ತು ಕನ್ನಡ ವಿಷಯಗಳಲ್ಲಿ ತಲಾ 98 ಅಂಕ ಹಾಗೂ ಬೇಸಿಕ್ ಮ್ಯಾಥ್ಸ್ ಮತ್ತು ಬಿಸಿನೆಸ್ ಸ್ಟಡೀಸ್ ವಿಷಯಗಳಲ್ಲಿ ತಲಾ 97 ಅಂಕಗಳನ್ನು ಗಳಿಸುವ ಮೂಲಕ ಉತ್ತಮ ಸಾಧನೆ ತೋರಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.