ಮೂಡುಬಿದಿರೆ: ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ಇದರ ರೋಟರಿ ವರ್ಷ 2026-27ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 10 ರಂದು ಶುಕ್ರವಾರ ಸಂಜೆ 6:45 ಕ್ಕೆ ಮೂಡುಬಿದಿರೆಯ ನಿಶ್ಮಿತಾ ಟವರ್ಸ್‌ನಲ್ಲಿರುವ ಪ್ಯಾರಡೈಸ್ ಮಲ್ಟಿ ಪರ್ಪಸ್ ಹಾಲ್‌ನಲ್ಲಿ ಆಯೋಜನೆಗೊಂಡಿದೆ.
ರೋಟರಿ ಜಿಲ್ಲೆ 3181 ವಲಯ 4 ರ ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್‌ನ ನೂತನ ಅಧ್ಯಕ್ಷರಾಗಿ ಡೆನಿಸ್ ಪೆರೇರಾ ಮತ್ತು ನೂತನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಭಂಡಾರಿ ಅಧಿಕಾರ ಸ್ವೀಕರಿಸಲಿದ್ದಾರೆ. ಸಹಾಯಕ ಗವರ್ನರ್ ಬಿ. ಶ್ರೀಕಾಂತ್ ಕಾಮತ್ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ವಲಯ ಲೆಫ್ಟಿನೆಂಟ್ ಪೂರ್ಣಚಂದ್ರ ಜೈನ್ ಮತ್ತು ಜಿಎಸ್‌ಆರ್ ಹರೀಶ್ ನಾಯಕ್ ಗೌರವ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. 2025-26ರ ಸಾಲಿನ ರೋಟರಿ ಅಧ್ಯಕ್ಷ ಹರೀಶ್ ಎಂಕೆ ಮತ್ತು ಕಾರ್ಯದರ್ಶಿ ಭರತ್ ಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತಲಿರುವರು.