ಮೂಡುಬಿದಿರೆ: ವಾಸ್ತುಶಿಲ್ಪಿ ಆರ್. ಅನನ್ಯಾ ಜೈನ್ ಇಟಲಿಯ ಪ್ರತಿಷ್ಠಿತ ಪಾಲಿಟೆಕ್ನಿಕೊ ಡಿ ಮಿಲಾನೊ ವಿಶ್ವವಿದ್ಯಾಲಯದಲ್ಲಿ ಆರ್ಕಿಟೆಕ್ಚರ್ ಡಿಸೈನ್ ಮ್ಯಾನೇಜ್‌ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಅತ್ಯುತ್ತಮ ಶ್ರೇಣಿಯೊಂದಿಗೆ ಪೂರ್ಣಗೊಳಿಸಿ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ.

ಅನನ್ಯಾ ಜೈನ್ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಬಿ.ಪಿ. ಸಂಪತ್ ಕುಮಾರ್ ಹಾಗೂ ವೀರಶ್ರೀ ದಂಪತಿಯ ಪುತ್ರಿ. ವಾಸ್ತುಶಿಲ್ಪ ಕ್ಷೇತ್ರದಲ್ಲಿ ಉನ್ನತ ಶಿಕ್ಷಣಕ್ಕಾಗಿ ಇಟಲಿಗೆ ತೆರಳಿದ್ದ ಅವರು, ವಿಶ್ವದ ಪ್ರಮುಖ ವಾಸ್ತುಶಿಲ್ಪ ಮತ್ತು ವಿನ್ಯಾಸ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಪಾಲಿಟೆಕ್ನಿಕೊ ಡಿ ಮಿಲಾನೊ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೂರ್ಣಗೊಳಿಸಿ ಈ ಸಾಧನೆ ಮಾಡಿದ್ದಾರೆ.