ಮೂಡುಬಿದಿರೆ: ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು (ಯುನೆಸ್ಕೋ ಮಾನ್ಯತೆ ಪಡೆದ ಸಂಸ್ಥೆ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮೂಡುಬಿದಿರೆ ತಾಲೂಕು ಘಟಕವನ್ನು ಪುನರ್ರಚನೆ ಮಾಡಲಾಗಿದ್ದು, ಅಧ್ಯಕ್ಷೆಯಾಗಿ ಸಮಾಜ ಸೇವಕಿ ಪದ್ಮಶ್ರೀ ಭಟ್ ನಿಡ್ಡೋಡಿ ಅವರನ್ನು ಎರಡನೇ ಬಾರಿಗೆ ನೇಮಕ ಮಾಡಲಾಗಿದೆ.

ಬೆಂಗಳೂರಿನ ರಾಜ್ಯ ಘಟಕದ ಸಂಪೂರ್ಣ ಅನುಮೋದನೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ನೇಮಕಾತಿ ಆದೇಶವನ್ನು ಪ್ರಕಟಿಸಿದ್ದಾರೆ.

ಪುನರ್ರಚನೆಯಾದ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಭುವನಾಭಿರಾಮ ಉಡುಪ ಹಾಗೂ ಅಗರಿ ರಾಘವೇಂದ್ರ ರಾವ್ ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಅಭಿಷೇಕ್ ಶೆಟ್ಟಿ ಐಕಳ, ಪ್ರಧಾನ ಕಾರ್ಯದರ್ಶಿಗಳಾಗಿ ಮಲ್ಲಿಕಾ ಸುಖೇಶ್ ಮತ್ತು ಗೀತಾ ಎಂ, ಕಾರ್ಯದರ್ಶಿಯಾಗಿ ಸದಾನಂದ ನಾರಾವಿ, ಸಂಚಾಲಕರಾಗಿ ಚೇತನಾ ಹೆಗ್ಡೆ, ಕೋಶಾಧಿಕಾರಿಯಾಗಿ ಶೇಕ್ ಲತೀಪ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಮನಾ ಪ್ರಸಾದ್, ಸಂಘಟನಾ ಕಾರ್ಯದರ್ಶಿಯಾಗಿ ಚಂದ್ರಹಾಸ ದೇವಾಡಿಗ ಹಾಗೂ ಪತ್ರಿಕಾ ಪ್ರತಿನಿಧಿಯಾಗಿ ರಘನಾಥ್ ಕಾಮತ್ ಕೆಂಚನಕೆರೆ ನೇಮಕಗೊಂಡಿದ್ದಾರೆ.

ಗೌರವ ಸಲಹೆಗಾರರಾಗಿ ನಾಗರಾಜ ಶೆಟ್ಟಿ ಅಂಬೂರಿ, ರಾಮಕೃಷ್ಣ ಶಿರೂರು ಮತ್ತು ವೇದಾವತಿ ಎಂ ಕಾರ್ಯನಿರ್ವಹಿಸಲಿದ್ದು, ಕಾನೂನು ಸಲಹೆಗಾರರಾಗಿ ಆಶಾಲತ ಎಚ್ ಅವರನ್ನು ನೇಮಕ ಮಾಡಲಾಗಿದೆ. ತಾಲೂಕು ಉಸ್ತುವಾರಿಯಾಗಿ ಜಿಲ್ಲಾ ಉಪಾಧ್ಯಕ್ಷ ಮಂದಾರ ರಾಜೇಶ್ ಭಟ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಮೂಡುಬಿದಿರೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಜಾನಪದ ಕಲೆ ಮತ್ತು ಸಂಸ್ಕೃತಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ 50 ಜಾನಪದ ಸದಸ್ಯರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ಈ ತಂಡದ ಮೂಲಕ ಜಾನಪದ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬೆಳೆಸುವ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ.