ಮೂಡುಬಿದಿರೆ: ಕಡಂದಲೆಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್, ಪುತ್ತೂರು ಹಾಗೂ ಮೆಡಲಿಯಾ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ನಿರ್ಮಿಸಲಾದ 'ವಿಜ್ಞಾನ ಪ್ರಪಂಚ' ವಿಜ್ಞಾನ ಪ್ರಯೋಗಾಲಯವನ್ನು ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಎಚ್.ಎಸ್. ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಮಾನಂದ ಪಂಡಿತ್ ವಹಿಸಿದ್ದರು.

ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ಇಂಡಸ್ಟ್ರೀಸ್, ಮೂಡುಬಿದಿರೆಯ ಮಾಲಕ ಅನಂತಕೃಷ್ಣರಾವ್ ಅವರ ಪುತ್ರ ದುರ್ಗಾಪ್ರಸಾದ್ ರಾವ್ ವಿದ್ಯಾರ್ಥಿಗಳಿಗೆ ಶಾಲಾ ಪರಿಕರಗಳನ್ನು ವಿತರಿಸಿದರು. ಎಂಆರ್‌ಪಿಎಲ್–ಒಎನ್‌ಜಿಸಿ ಜನರಲ್ ಮ್ಯಾನೇಜರ್ ಗೋಪಿರಾಮ್ ವಿದ್ಯಾರ್ಥಿಗಳ ನೂತನ ಟ್ರ್ಯಾಕ್ ಪ್ಯಾಂಟ್ ಮತ್ತು ಟಿ-ಶರ್ಟ್‌ಗಳನ್ನು ಬಿಡುಗಡೆ ಮಾಡಿದರು.

ಶಾಲಾ ಸಂಚಾಲಕ ಕೆ. ಸುದರ್ಶನ್ ಶೆಟ್ಟಿ, ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕ ಪ್ರೊ. ಶ್ರೀಶ ಭಟ್, ಸಂಪನ್ಮೂಲ ವ್ಯಕ್ತಿ ಹರೀಶ್ ಬಿ., ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಂದ್ರ ಭಟ್, ಮುಖ್ಯ ಶಿಕ್ಷಕ ದಿನಕರ ಕುಂಭಾಶಿ ಉಪಸ್ಥಿತರಿದ್ದರು.

ಶಾಲಾ ಆಡಳಿತ ಮಂಡಳಿಯ ಸದಸ್ಯರು, ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯರು, ಶಾಲೆಯ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ಪೋಷಕರು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.