ಮೂಡುಬಿದಿರೆ: 'ನಮ್ಮ ಕಸ ನಮ್ಮ ಜವಾಬ್ದಾರಿ' ಎಂಬ ಮನೋಭಾವ ಬೆಳೆಸಿಕೊಂಡು ಕಸವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಿದಾಗ ಮಾತ್ರ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಲು ಸಾಧ್ಯ ಎಂದು ಮೂಡಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ನುಡಿದರು.
ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನ ಸಮಾಜ ಸೇವಾ ಸಂಘ ಹಾಗೂ ಮೂಡುಬಿದಿರೆ ಪುರಸಭೆಯ ಸಹಯೋಗದಲ್ಲಿ ಆಯೋಜಿಸಿದ್ದ ಕಸ ವಿಲೇವಾರಿ ಪ್ರಾತ್ಯಕ್ಷಿಕೆ ಕಾರ್ಯಕ್ರಮದ ಅವರು ಮಾತನಾಡಿದರು. ಮೂಡುಬಿದಿರೆ ಪುರಸಭೆಯ ಮುಖ್ಯಾಧಿಕಾರಿ ಇಂದು, ಪರಿಸರ ಅಭಿಯಂತೆ ಶಿಲ್ಪಾ ಎಸ್. ಅವರನ್ನು ಸ್ವಾಮೀಜಿ ಗೌರವಿಸಿದರು.
ಶಿಲ್ಪಾ ಎಸ್. ವಿದ್ಯಾರ್ಥಿಗಳಿಗೆ ಕಸ ವಿಲೇವಾರಿ ಕುರಿತು ಮಾಹಿತಿ ನೀಡಿ, ವಿವಿಧ ರೀತಿಯ ಕಸವನ್ನು ಹೇಗೆ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂಬುದನ್ನು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಪ್ರಜ್ವಲ್ ಶೆಣೈ ವಿವಿಧ ಮಾದರಿಗಳ ಮೂಲಕ ಕಸ ವಿಲೇವಾರಿಯ ಪ್ರಾತ್ಯಕ್ಷಿಕೆ ನೀಡಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಶಿಕ್ಷಕರಕ್ಷಕ ಸಂಘದ ಅಧ್ಯಕ್ಷೆ ಶ್ವೇತಾ ಜೈನ್, ಉಪನ್ಯಾಸಕರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಶ್ರೀ ಸ್ವಾಗತಿಸಿದರು. ಸರಸ್ವತಿ ವಂದಿಸಿದರು.