ಕಾರ್ಕಳ: ಕಟ್ಟೆ ಫ್ರೆಂಡ್ಸ್ ನಿಟ್ಟೂರು, ಉಡುಪಿ ಇವರ ಸಾರಥ್ಯದಲ್ಲಿ ಯುಗಾದಿ ಸಂಭ್ರಮ 2026ರ ಪ್ರಯುಕ್ತ ಆಯೋಜಿಸಲಾಗಿದ್ದ ‘ತೆಲಿಪುಲೆ ತೆಲಿಪಾಲೆ’ ಕುಸಲ್ದ ಪಂಥ (ಹಾಸ್ಯ ಸ್ಪರ್ಧೆ) ಸ್ಪರ್ಧೆಯಲ್ಲಿ ಬೊಳ್ಳಿ ಕಲಾವಿದೆರ್ ಬಜಗೋಳಿ ತಂಡವು ಪ್ರಥಮ ಸ್ಥಾನವನ್ನು ಗಳಿಸಿತು. ನಿಟ್ಟೂರು ಅಡ್ಕದಕಟ್ಟೆಯಲ್ಲಿರುವ ಸಲ್ಫಾ ಗ್ರೌಂಡ್ನಲ್ಲಿ ನಡೆದ ಹಾಸ್ಯ ಸ್ಪರ್ಧೆಯಲ್ಲಿ ವಿಜೇತ ತಂಡವು ಪ್ರಥಮ ಸ್ಥಾನದೊಂದಿಗೆ 50,000 ರೂಪಾಯಿ ನಗದು ಮತ್ತು ಶಾಶ್ವತ ಫಲಕವನ್ನು ತಮ್ಮದಾಗಿಸಿಕೊಂಡಿತು. ಕಾರ್ಯಕ್ರಮದಲ್ಲಿ ಉತ್ತಮ ಹಾಸ್ಯ ನಟ, ಉತ್ತಮ ಹಾಸ್ಯ ನಟಿ, ಉತ್ತಮ ನಿರ್ದೇಶನ ಹಾಗೂ ಉತ್ತಮ ಸ್ಕ್ರಿಪ್ಟ್ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಕಲಾವಿದರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಟ್ಟೆ ಫ್ರೆಂಡ್ಸ್ ನಿಟ್ಟೂರಿನ ಸದಸ್ಯರು, ಊರಿನ ಹಿರಿಯರು ಮತ್ತು ಹಾಸ್ಯ ಪ್ರಿಯರು ಭಾಗವಹಿಸಿ ಸ್ಪರ್ಧಾಳುಗಳನ್ನು ಪ್ರೋತ್ಸಾಹಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.