ಮೂಡುಬಿದಿರೆ: ಗುರುಪೂರ್ಣಿಮೆ ಪ್ರಯುಕ್ತ ಇಲ್ಲಿನ ಶ್ರೀ ಕ್ಷೇತ್ರ ಕೊಣಾಜೆ ಕಲ್ಲು ಸಿದ್ಧಾಶ್ರಮ ಮಠದಲ್ಲಿ ಜುಲೈ 29ರ ಬುಧವಾರ ಗುರುಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಕೊಣಾಜೆ ಕಲ್ಲು ಸಿದ್ಧಾಶ್ರಮ ಮಠದ ಗಣೇಶ್ ಗುರೂಜಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 11 ಗಂಟೆಗೆ ಗುರುಪೂಜೆ ಆರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಯಿಂದ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಗುರುಪೂರ್ಣಿಮೆಯ ಅಂಗವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಗುರುಗಳ ಆಶೀರ್ವಾದ ಪಡೆಯುವಂತೆ ಕೊಣಾಜೆ ಕಲ್ಲು ಸಿದ್ಧಾಶ್ರಮ ಮಠ ಪ್ರಕಟಣೆಯಲ್ಲಿ ಕೋರಲಾಗಿದೆ.