ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2025-26ನೇ ಸಾಲಿನ 15ನೇ ವಾರ್ಷಿಕ ಸಾಮಾನ್ಯ ಸಭೆಯು ಜುಲೈ 26ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಪಡೀಲ್‌ನ ಬೈರಾಡಿಕೆರೆ ಹತ್ತಿರ ಇರುವ ಸಂಘದ ಆಡಳಿತ ಕಚೇರಿ ಆತ್ಮಶಕ್ತಿ ಸೌಧ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ವಹಿಸಲಿದ್ದಾರೆ. ಸಂಘದ ಸದಸ್ಯರು ಸಭೆಯಲ್ಲಿ ಭಾಗವಹಿಸಿ ವಾರ್ಷಿಕ ಸಾಮಾನ್ಯ ಸಭೆಯ ಕಾರ್ಯಸೂಚಿಗಳನ್ನು ಯಶಸ್ವಿಗೊಳಿಸುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.