ಮೂಡುಬಿದಿರೆ: ಶಿರ್ತಾಡಿ ಶ್ರೀ ಕ್ಷೇತ್ರ ಕಂದಿರು ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನದಲ್ಲಿ ಅಮಾವಾಸ್ಯೆ ಪಾಡ್ಯದ ಅಂಗವಾಗಿ ಜುಲೈ 16ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಬೆಳಿಗ್ಗೆ 8 ಗಂಟೆಗೆ ಚಂಡಿಕಾ ಹೋಮ ಆರಂಭವಾಗಲಿದೆ. ಬಳಿಕ ಬೆಳಿಗ್ಗೆ 10 ಗಂಟೆಯಿಂದ ನಾಗ ತನುತಂಬಿಲ, ರುದ್ರಾಭಿಷೇಕ, ಹೂವಿನ ಪೂಜೆ ಹಾಗೂ ಪಾಡ್ಯದ ವಿಶೇಷ ಪೂಜೆಗಳು ನೆರವೇರಲಿವೆ. ಮಧ್ಯಾಹ್ನ ಕಲ್ಲುಡ ದೈವ ದರ್ಶನ ನಡೆಯಲಿದ್ದು, ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸೋಮನಾಥ ಶಾಂತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದ್ದಾರೆ.