ಮೂಡುಬಿದಿರೆ : ಬ್ಲಾಕ್ ಕಾಂಗ್ರೆಸ್ ಮೂಡುಬಿದಿರೆ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಇರುವೈಲಿನ ಕುಮಾರ್ ಪೂಜಾರಿ ನೇಮಕಗೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇಮಕಾತಿ ಪತ್ರ ನೀಡಿ ಶುಭ ಹಾರೈಸಿದರು. ಮಾಜಿ ಶಾಸಕ ಜೆ.ಆರ್. ಲೋಬೊ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಉಪಸ್ಥಿತರಿದ್ದರು.