ಮೂಡುಬಿದಿರೆ: ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲೆಯ ಪೋಷಕ ದೇವತೆ ಕಾರ್ಮೆಲ್ ಮಾತೆಯ ಹಬ್ಬವನ್ನು ಬುಧವಾರ ಆಚರಿಸಲಾಯಿತು.

ಕಾರ್ಮೆಲ್ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಶೇಷ ಗೌರವ ಅರ್ಪಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಲೆಯ ಜಂಟಿ ಕಾರ್ಯದರ್ಶಿ ರೆವ. ಫಾ. ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ ಮಾತನಾಡಿ, ಕಾರ್ಮೆಲ್ ಮಾತೆಯ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರೀತಿ, ಸೇವೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕಿ ಬಿಂದು ಮ್ಯಾಕ್ಸಿನ್ ಡಿಸೋಜ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಯಿತು.