ಮೂಡುಬಿದಿರೆ: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳನ್ನೊಳಗೊಂಡ ಜಿಲ್ಲಾ ಕಂಬಳ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.19ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಮೂಡುಬಿದಿರೆಯ ಸೃಷ್ಟಿ ಗಾರ್ಡನ್‌ನಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷ ಚಂದ್ರಹಾಸ ಸನಿಲ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಂಗಿನಮನೆ ಹಾಗೂ ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಮುಚ್ಚೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪದಗ್ರಹಣ ಸಮಾರಂಭದ ಬಳಿಕ ಮುಂಬರುವ ಕಂಬಳಗಳ ದಿನಾಂಕ ನಿಗದಿ ಹಾಗೂ ಕಂಬಳದ ಅಭಿವೃದ್ಧಿ ಮತ್ತು ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ ಎಂದು ಚಂದ್ರಹಾಸ ಸನಿಲ್ ತಿಳಿಸಿದ್ದಾರೆ.