ಮೂಡುಬಿದಿರೆ: ಮಿಜಾರಿನಲ್ಲಿ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮೃತರನ್ನು ಮಿಜಾರು ಕೊಪ್ಪದಕುಮೇರು ಸಮೀಪದ ನಿವಾಸಿ ಸ್ನೇಹಾ ಎಂದು ಗುರುತಿಸಲಾಗಿದೆ. ಅವರು ಅರ್ಚಕ ಗುರು ಭಟ್ ಅವರ ಪತ್ನಿಯಾಗಿದ್ದು, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.