ಮೂಡುಬಿದಿರೆ: ಉಳಿಯ ಅಲಂಗಾರಿನ ಗಾಯತ್ರಿ ಫರ್ನಿಚರ್ ವರ್ಕ್ಸ್‌ನ ಮಾಲಿಕ ರತ್ನಾಕರ ಆಚಾರ್ಯ (65) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಭಾನುವಾರ ನಸುಕಿನ ವೇಳೆ ನಿಧನರಾಗಿದ್ದಾರೆ.
ಧಾರ್ಮಿಕ ಕಾರ್ಯಗಳಲ್ಲಿ ಸೇವಾಸಕ್ತರಾಗಿದ್ದ ಅವರು ಸಮಾಜಮುಖಿ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ರತ್ನಾಕರ ಆಚಾರ್ಯ ಮೂಡುಬಿದಿರೆ ಶೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಮಾಜಿ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಹಿಂದೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಬ್ರಹ್ಮಕಲಶ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಕಾರ್ಯಗಳ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಅವರು ದಾನಿಯಾಗಿಯೂ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.