ಮೂಡುಬಿದಿರೆ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ವತಿಯಿಂದ ಪರಿಸರ ಪ್ರೇಮಿ ರಸಿಕಾ ಅವರ ಸ್ಮರಣಾರ್ಥ ಆಯೋಜಿಸಲಾದ 'ಸಸ್ಯ ಶ್ಯಾಮಲಾ2026' ಸಾವಿರ ಗಿಡಗಳನ್ನು ನೆಡುವ ಹಾಗೂ ಹಂಚುವ ಹಸಿರು ಅಭಿಯಾನ ಇರ್ವತ್ತೂರು ಕೊಳಕ್ಕೆ ಆದಿನಾಥ ಬಸದಿಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಂಶುಪಾಲ ಗುಣಪಾಲ ಕಡಂಬ ಮಾತನಾಡಿ, ಶಿಕ್ಷಣದೊಂದಿಗೆ ಪರಿಸರ ಸಂರಕ್ಷಣೆಯ ಸಂಸ್ಕಾರವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುತ್ತಿರುವ ಎಕ್ಸಲೆಂಟ್ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಪ್ರಗತಿಪರ ಕೃಷಿಕ ಸುಭಾಷ್‌ಚಂದ್ರ ಚೌಟ, ಚಂದ್ರರಾಜ ಅಧಿಕಾರಿ, ಧರಣೇಂದ್ರ ಜೈನ್ ಮಾಂಟ್ರಾಡಿ, ಶಕುಂತಳಾ ಜೈನ್ ಬಜಗೋಳಿ, ಸಂಸ್ಥೆಯ ಉಪನ್ಯಾಸಕ ಡಾ. ವಾದಿರಾಜ ಕಲ್ಲೂರಾಯ, ಸಾರ್ವಜನಿಕ ಸಂಪರ್ಕಾಧಿಕಾರಿ ಸ್ವರೂಪ್ ಜೈನ್, ಎನ್.ಎಸ್.ಎಸ್. ಅಧಿಕಾರಿ ಅಶೋಕ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ, ಶಿಕ್ಷಕಿಯರಾದ ರಂಜಿತಾ, ವಿಮಲಾ, ಹರ್ಷಿತ ಬಂಗೇರ ಉಪಸ್ಥಿತರಿದ್ದರು.