ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಾಗೂ ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಜುಲೈ 23, 2026ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿಪೂರ್ವ ಕಾಲೇಜುಗಳು ಹಾಗೂ ಪದವಿಪೂರ್ವ ವಸತಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಮುಂದುವರಿದ ಮಳೆಯ ಪರಿಣಾಮ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿಯನ್ನು ಪರಿಗಣಿಸಿ ಶಿಕ್ಷಣ ಸಂಸ್ಥೆಗಳಿಗೆ ಒಂದು ದಿನ ರಜೆ ಘೋಷಿಸಲಾಗಿದೆ.