ಮೂಡುಬಿದಿರೆ: ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸುರಕ್ಷಾ ಅಧಿಕಾರಿಗಳಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಮೂವರು ಮಹಿಳಾ ಅಧಿಕಾರಿಗಳನ್ನು ಆರೋಗ್ಯ ಕೇಂದ್ರದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಹಿರಿಯ ಸುರಕ್ಷಾ ಅಧಿಕಾರಿಯಾಗಿ ಪದೋನ್ನತಿ ಹೊಂದಿ ಬೆಳುವಾಯಿಗೆ ವರ್ಗಾವಣೆಗೊಂಡಿರುವ ನಿವೇದಿತಾ, ಉಳ್ಳಾಲಕ್ಕೆ ವರ್ಗಾವಣೆಗೊಂಡಿರುವ ಪ್ರತಿಭಾ ಹಾಗೂ ಕಟೀಲಿಗೆ ವರ್ಗಾವಣೆಗೊಂಡಿರುವ ಅಕ್ಷತಾ ಅವರನ್ನು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸನ್ಮಾನಿಸಿ ಶುಭ ಹಾರೈಸಿದರು.
ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ನಿವೇದಿತಾ, ಪ್ರತಿಭಾ ಹಾಗೂ ಅಕ್ಷತಾ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಡಾ. ಭರತ್, ಡಾ. ಹಾದಿಯಾ, ಸುನಂದ, ಚಂದ್ರಿಕಾ, ಪುಷ್ಪ ಸೇರಿದಂತೆ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.