ಮೂಡುಬಿದಿರೆ: ಸಾಮಾನ್ಯ ಗಾತ್ರಕ್ಕಿಂತ ಹತ್ತು ಪಟ್ಟು ಹೆಚ್ಚು ತೂಕವಿರುವ ಅಪರೂಪದ ರಾಮಫಲವೊಂದು ಅಲಂಗಾರಿನಲ್ಲಿ ಸಾರ್ವಜನಿಕರ ಗಮನಸೆಳೆಯುತ್ತಿದೆ. ಸದ್ಯ ಅಲಂಗಾರ್ ಪ್ರಶಾಂತ್ ನಾಯ್ಕ್ ಅವರ ತರಕಾರಿ ಅಂಗಡಿಯಲ್ಲಿ ಈ ಬೃಹತ್ ಹಣ್ಣನ್ನು ಮಾರಾಟಕ್ಕಿಡಲಾಗಿದ್ದು, ಹಣ್ಣಿನ ಗಾತ್ರ ಮತ್ತು ತೂಕವು ಜನರಲ್ಲಿ ಅಚ್ಚರಿ ಮೂಡಿಸಿದೆ. ಸಾಮಾನ್ಯವಾಗಿ ಒಂದು ರಾಮಫಲವು 300 ರಿಂದ 500 ಗ್ರಾಂ ತೂಕವಿರುತ್ತದೆ. ಮಣ್ಣಿನ ಫಲವತ್ತತೆ ಹಾಗೂ ಉತ್ತಮ ಆರೈಕೆ ಇದ್ದಲ್ಲಿ ಗರಿಷ್ಠ 1 ಕೆಜಿ ವರೆಗೆ ತೂಗುವುದು ಅಪರೂಪದ ಸಂಗತಿಯಾಗಿದೆ. ಆದರೆ, ಪ್ರಶಾಂತ್ ನಾಯ್ಕ್ ಅವರ ಅಂಗಡಿಯಲ್ಲಿರುವ ಈ ಹಣ್ಣು ಬರೋಬ್ಬರಿ 4.5 ಕೆಜಿ ತೂಕವಿದ್ದು, ಸೀತಾಫಲಕ್ಕಿಂತ ಗಾತ್ರದಲ್ಲಿ ದೊಡ್ಡದಾಗಿರುವ ರಾಮಫಲವು ಇದೀಗ ನೋಡುಗರ ಕುತೂಹಲಕ್ಕೆ ಕಾರಣವಾಗಿದೆ. ಅಧಿಕ ತಿರುಳು ಹೊಂದಿರುವ ಈ ದೈತ್ಯ ಹಣ್ಣಿಗೆ 600 ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.