ಮೂಡುಬಿದಿರೆ: ತಾಲೂಕಿನಲ್ಲಿಯೇ ಸುಮಾರು ಎರಡು ದಶಕಗಳ ಕಾಲ ಸಿವಿಲ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದ ಬೆಳ್ತಂಗಡಿ ತಾಲೂಕಿನ ಆಳದಂಗಡಿ ಗ್ರಾಮದ ನಾವೂರಗುತ್ತು ಸತೀಶ್ ಹೆಗ್ಡೆ (57) ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.

ಸಿವಿಲ್ ಇಂಜಿನಿಯರ್ ಆಗಿದ್ದ ಸತೀಶ್ ಹೆಗ್ಡೆ, ವಾಣಿಜ್ಯ ಬ್ಯಾಂಕ್‌ಗಳು ಹಾಗೂ ವಿವಿಧ ಸಹಕಾರಿ ಸಂಘ-ಸಂಸ್ಥೆಗಳಿಗೆ ಕನ್ಸಲ್ಟೆಂಟ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೂಡುಬಿದಿರೆಯ ಹಳೆ ಸೆಂಟ್ರಲ್ ಕಫೆ ಕಟ್ಟಡದಲ್ಲಿ ಕಚೇರಿ ಹೊಂದಿದ್ದು, ವೃತ್ತಿಪರ ಸೇವೆಯ ಮೂಲಕ ವಿಶಿಷ್ಟ ಗುರುತನ್ನು ಪಡೆದಿದ್ದರು.

ಸರಳ ವ್ಯಕ್ತಿತ್ವ, ವೃತ್ತಿ ಪ್ರಾಮಾಣಿಕತೆ ಹಾಗೂ ನಿಷ್ಠಾವಂತ ಸೇವೆಯಿಂದ ಜನರ ವಿಶ್ವಾಸ ಗಳಿಸಿದ್ದ ಸತೀಶ್ ಹೆಗ್ಡೆ, ಸಹೋದ್ಯೋಗಿಗಳು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಮೃತರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ.