ಮೂಡುಬಿದಿರೆ: ಭಾರತೀಯ ಮಜ್ದೂರ್ ಸಂಘದ ಮೂಡುಬಿದಿರೆ ತಾಲೂಕು ಸಮಿತಿಯ 71ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಂಘದ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಕಾರ್ಯದರ್ಶಿ ಕುಮಾರನಾಥ ಶೆಟ್ಟಿ ಕಲ್ಮಂಜ ಮಾತನಾಡಿ, ಭಾರತೀಯ ಮಜ್ದೂರ್ ಸಂಘದ ಪರಿಚಯ ನೀಡಿ, ಕಟ್ಟಡ ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಕಾರ್ಮಿಕ ಕಲ್ಯಾಣ ಸೌಲಭ್ಯಗಳು ಹಾಗೂ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಅಧ್ಯಕ್ಷ ರಾಜೇಶ್ ಸುವರ್ಣ ಸ್ವಾಗತ ಕೋರಿದ ಬಳಿಕ ಅಧ್ಯಕ್ಷೀಯ ಮಾತುಗಳನ್ನಾಡಿದರು. ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಕ್ಲಬ್ ಟೆಂಪಲ್ ಟೌನ್‌ನ ಮಾಜಿ ಅಧ್ಯಕ್ಷ ಎಂಕೆ ಹರೀಶ್ ಮಾತನಾಡಿ, ಜುಲೈ 31ರಂದು ಜೈನ್ ಸೆಂಟರ್ ಮೆಡಿಕಲ್‌ನಲ್ಲಿ ನಡೆಯಲಿರುವ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ಕಟ್ಟಡ ಕಾರ್ಮಿಕರು ಹಾಗೂ ಆಟೋರಿಕ್ಷಾ ಚಾಲಕರು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಸಂದೀಪ್ ಶೆಟ್ಟಿ, ಉಪಾಧ್ಯಕ್ಷರಾದ ಜಯರಾಮ್ ರಾವ್ ಹಾಗೂ ಪದ್ಮನಾಭ ಇರುವೈಲ್, ಕೋಶಾಧಿಕಾರಿ ರಾಜೇಶ್ ಶೆಟ್ಟಿ ಮತ್ತು ಪ್ರಶಾಂತ್ ಅಂಚನ್ ಉಪಸ್ಥಿತರಿದ್ದರು. ಕೊನೆಯಲ್ಲಿ ವಂದಿಸಿದರು.