ಮೂಡುಬಿದಿರೆ: 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ಪೂಜಾರಿ 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯದ ಪ್ರಥಮ ಸ್ಥಾನ ಗಳಿಸಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ, ಮುಲ್ಕಿ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಸನ್ಮಾನ ಕಾರ್ಯಕ್ರಮವು ಸೋಮವಾರ ಬೆಳಿಗ್ಗೆ 11 ಗಂಟೆಗೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ್ ಆಳ್ವಾ ಅವರ ಕಚೇರಿಯಲ್ಲಿ, ಅವರ ಸಮ್ಮುಖದಲ್ಲಿ ನಡೆಯಲಿದೆ.
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ, ಮುಲ್ಕಿಯ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಅವರ ನೇತೃತ್ವದಲ್ಲಿ ದಿಶಾ ಪೂಜಾರಿಗೆ ನಗದು ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಗುವುದು. ಈ ಕುರಿತು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ, ಮುಲ್ಕಿಯ ಪ್ರಧಾನ ಕಾರ್ಯದರ್ಶಿ ಜಯಾನಂದ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.