ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಮಹಿಳಾ ಘಟಕದ ಆಶ್ರಯದಲ್ಲಿ ತುಳು ಗೀತೆಗಳ ಗಾಯನ ಸ್ಪರ್ಧೆ ಹಾಗೂ ಆಟಿದ ಗೊಬ್ಬು ಪಂಥದ ಉದ್ಘಾಟನಾ ಸಮಾರಂಭವು ಭಾನುವಾರ ಪಂಚರತ್ನ ಸಭಾಂಗಣದಲ್ಲಿ ನಡೆಯಿತು. ಆಗಸ್ಟ್ 9ರಂದು ಆಳ್ವಾಸ್ ವಿದ್ಯಾಗಿರಿ ಸಂಕೀರ್ಣದ ಮೋಹಿನಿ ಅಪ್ಪಾಜಿ ನಾಯಕ್ ವೇದಿಕೆಯಲ್ಲಿ ನಡೆಯಲಿರುವ ಆಟಿಡೊಂಜಿ ದಿನ–2026 ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಸಮಾಜ ಸೇವಕಿ ಪ್ರಕಾಶಿನಿ ವಿನಯ್ ಹೆಗ್ಡೆ, ವೈದ್ಯೆ ಡಾ. ಗ್ರೀಷ್ಮಾ ವಿವೇಕ್ ಆಳ್ವ ಹಾಗೂ ಉದ್ಯಮಿ ದಿವ್ಯಾ ವಿನಯ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಘಟಕದ ಕಾರ್ಯದರ್ಶಿ ಸಂಗೀತ ಶೆಟ್ಟಿ, ಕೋಶಾಧಿಕಾರಿ ಗೀತಾ ಪಿ. ಶೆಟ್ಟಿ ಹಾಗೂ ಕ್ರೀಡಾ ಕಾರ್ಯದರ್ಶಿ ಅಮೃತ ಪಿ. ಹೆಗ್ಡೆ ಉಪಸ್ಥಿತರಿದ್ದರು.

ಮಹಿಳಾ ಘಟಕದ ಸಾಂಸ್ಕೃತಿಕ ಕಾರ್ಯದರ್ಶಿ ರಂಜಿತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.