ಮೂಡುಬಿದಿರೆ: ಇಲ್ಲಿನ ಧವಲಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ, ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಹಾಗೂ ಲಲಿತಾ ಕಲಾ ಸಂಘದ ಸಂಯೋಜನಾಧಿಕಾರಿ ಮಲ್ಲಿಕಾ ರಾವ್ ಅವರಿಗೆ 'ಭರವಸೆಯ ಶಿಕ್ಷಣ ರತ್ನ–2026' ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ರಜತ ಸಮ್ಮೇಳನದ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ, ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಬೆಳೆಸಿದ ಕಾರ್ಯ ಹಾಗೂ ಲಲಿತಾ ಕಲಾ ಸಂಘದ ಮೂಲಕ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸರ್ವತೋಮುಖ ಬೆಳವಣಿಗೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಮಲ್ಲಿಕಾ ರಾವ್ ಅವರನ್ನು 'ಭರವಸೆಯ ಶಿಕ್ಷಣ ರತ್ನ–2026' ಪ್ರಶಸ್ತಿಗೆ ನೀಡಿ ಗೌರವಿಸಲಾಯಿತು.