ಮೂಡಬಿದಿರೆ: ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶ್ರೀಮತಿ ಪ್ರತಿಭಾ ಕೆ.ಸಿ. ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು, ಸಮಾಜ, ಕುಟುಂಬ ಹಾಗೂ ಸ್ನೇಹಿತರ ಮೇಲಿನ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು. ಅಲ್ಲದೆ ಮಾದಕ ದ್ರವ್ಯಗಳನ್ನು ಸಂಗ್ರಹಿಸುವುದು ಹಾಗೂ ಮಾರಾಟ ಮಾಡುವುದರಿಂದ ಎದುರಾಗುವ ಕಾನೂನಾತ್ಮಕ ಪರಿಣಾಮಗಳ ಕುರಿತು ಮಾಹಿತಿ ನೀಡಿದರು.

ರವಿ ಕುಮಾರ್ ಉಪಸ್ಥಿತರಿದ್ದರು. ವೈಶಾಲಿ ಸ್ವಾಗತಿಸಿದರು. ಗೌರಿಶಂಕರ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾಶ್ರೀ ಜೈನ್ ವಂದಿಸಿದರು.