ಮೂಡುಬಿದಿರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮೂಡುಬಿದಿರೆ ಘಟಕದ ವತಿಯಿಂದ ಶ್ರೀ ನಾರಾಯಣ ಗುರುಗಳ ಜೀವನ–ಸಂದೇಶ ಗೋಷ್ಠಿ, ವಿದ್ಯಾರ್ಥಿವೇತನ, ಸನ್ಮಾನ ಹಾಗೂ ಯುವಸಿರಿ ಪುರಸ್ಕಾರ ಪ್ರದಾನ ಒಳಗೊಂಡ ‘ಅರಿವು–2026’ ಕಾರ್ಯಕ್ರಮ ಆಗಸ್ಟ್ 2ರಂದು ಭಾನುವಾರ 9.30ಕ್ಕೆ ಮೂಡುಬಿದಿರೆಯ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ಅಮೃತ ಸಭಾಭವನದಲ್ಲಿ ನಡೆಯಲಿದೆ.
ಮೂಲ್ಕಿ–ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಜಿನೇಂದ್ರ ಕೋಟ್ಯಾನ್ ಕೆ.ಜಿ.ಎಸ್., ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘ ಮೂಡುಬಿದಿರೆ ಅಧ್ಯಕ್ಷ ನವೀನ್ ಚಂದ್ರ ಕಕೇರ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ್ ಸಾಧು ಸನಿಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮುಂಬೈನ ಉದ್ಯಮಿ, ಹರಿ ನಿವಾಸ ಒಂಟಿಕಟ್ಟೆಯ ಸುಗಂಧಿ ಹರೀಶ್ ಅಮೀನ್ ಗುರು ಸಂದೇಶ ನೀಡಲಿದ್ದಾರೆ. ಪೂಂಜಾಲಕಟ್ಟೆ ನಾರಾಯಣಗುರು ವಸತಿ ಶಾಲೆ ಪ್ರಾಂಶುಪಾಲ ಸಂತೋಷ್ ಎಸ್. ಸನಿಲ್, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಸಂಘಟನಾ ಕಾರ್ಯದರ್ಶಿ ಶುಭಕರ ಪೂಜಾರಿ ಸಾದ್ವ, ಯುವಸ್ಪಂದನ ಸೇವಾ ಯೋಜನೆಯ ಅಧ್ಯಕ್ಷ ನವಾನಂದ, ನಾರಾಯಣಗುರು ತತ್ವಪ್ರಚಾರ ನಿರ್ದೇಶಕಿ ಯೋಗಿತಾ ನವಾನಂದ ಹಾಗೂ ದಯಾನಂದ ಮಾಸ್ತಿಕಟ್ಟೆ ಉಪಸ್ಥಿತರಿರಲಿದ್ದಾರೆ.
ಕಾರ್ಯದರ್ಶಿ ಮೇಘನಾ, ಕೋಶಾಧಿಕಾರಿ ಜಯಶೀಲಾ ಎಸ್. ಪೂಜಾರಿ, ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯುವವಾಹಿನಿ ಮೂಡುಬಿದಿರೆ ಘಟಕ ಮನವಿ ಮಾಡಿದೆ.