ಮೂಡುಬಿದಿರೆ: ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ ಕಡಂದಲೆ–ಪಾಲಡ್ಕ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ 172ನೇ ಜನ್ಮ ದಿನಾಚರಣೆ, 11ನೇ ವರ್ಷದ ಲಕ್ಷ ಕುಂಕುಮಾರ್ಚನೆ ಹಾಗೂ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯ ಅಂಗವಾಗಿ 2026ರ ಆಗಸ್ಟ್ 28ರಂದು ನಡೆಯಲಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಸಂಘದ ಸಭಾಂಗಣದಲ್ಲಿ ನಡೆಯಿತು.

ಸಂಘದ ಸರ್ವ ಸದಸ್ಯರ ಸಮ್ಮುಖದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಆಗಸ್ಟ್ 28ರಂದು ನಡೆಯಲಿರುವ ನಾರಾಯಣಗುರುವರ್ಯರ ಜಯಂತಿ, ಲಕ್ಷ ಕುಂಕುಮಾರ್ಚನೆ ಹಾಗೂ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಗೆ ಅಗತ್ಯ ಸಿದ್ಧತೆಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು.

ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಸೇವಾದಳದ ಸದಸ್ಯರು, ಮಹಿಳಾ ಘಟಕದ ಸದಸ್ಯರು ಹಾಗೂ ಸಂಘದ ಸರ್ವ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.