ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7 ಮತ್ತು 8ರಂದು ನಡೆಯಲಿರುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳದ ಕುರಿತು ಮಾಹಿತಿ ಕಾರ್ಯಾಗಾರವು ಆಗಸ್ಟ್ 1ರಂದು ಬೆಳಿಗ್ಗೆ 10 ಗಂಟೆಗೆ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆಯಲಿದೆ.

ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಉದ್ಯೋಗ ಮೇಳದ ನೋಂದಣಿ, ಭಾಗವಹಿಸುವ ವಿಧಾನ ಹಾಗೂ ಇತರೆ ಅಗತ್ಯ ಮಾಹಿತಿಗಳನ್ನು ಈ ಕಾರ್ಯಾಗಾರದಲ್ಲಿ ನೀಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಉದ್ಯೋಗ ಮೇಳದ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಉಮಾನಾಥ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.