ಮೂಡುಬಿದಿರೆ: ಭಾರಿ ಗಾಳಿ–ಮಳೆಯ ಪರಿಣಾಮ ಅಳಿಯೂರು ಜಂಕ್ಷನ್‌ನಲ್ಲಿ ರಸ್ತೆ ಬದಿಯ ಮರವೊಂದು ಉರುಳಿ ಬಿದ್ದ ಪರಿಣಾಮ ಕಾರು ಹಾಗೂ ಪಿಕಪ್ ವಾಹನ ಜಖಂಗೊಂಡಿವೆ.
ಮರ ರಸ್ತೆ ಮಧ್ಯೆ ಬಿದ್ದಿದ್ದರಿಂದ ಸುಮಾರು ಎರಡು ಗಂಟೆಗಳ ಕಾಲ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರು ಪರದಾಡುವಂತಾಯಿತು.
ಬಳಿಕ ಸ್ಥಳೀಯರು ಸ್ವಯಂಪ್ರೇರಿತವಾಗಿ ಮರವನ್ನು ತೆರವುಗೊಳಿಸಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರು. ಇದಾದ ಬಳಿಕ ವಾಹನಗಳ ಸಂಚಾರವು ಎಂದಿನಂತೆ ಪುನರಾರಂಭವಾಯಿತು.