ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಡಿಪ್ಲೊಮಾ ಹಾಗೂ ಐಟಿಐ ಕಾಲೇಜುಗಳಿಗೆ ಆಗಸ್ಟ್ 1ರಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ರಜೆ ಘೋಷಿಸಿದ್ದಾರೆ.

ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಸಂಚರಿಸದೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.