ಮೂಡುಬಿದಿರೆ: ತಾಲೂಕಿನ ಬೆಳುವಾಯಿ ಗ್ರಾಮದ ನಾಣಿಲ್‌ನಲ್ಲಿ ಯುವಕನೊಬ್ಬ ತನ್ನ ಅಕ್ಕನೊಂದಿಗೆ ವೀಡಿಯೋ ಕಾಲ್‌ನಲ್ಲಿ ಶುಕ್ರವಾರ ಮಾತನಾಡುತ್ತಲೇ ನೇಣು ಬಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ ಸಯ್ಯದ್ ಅನ್ವರ್ (25) ಮೃತರು. ಇಸ್ಮಾಯಿಲ್ ಅವರ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದ ಅನ್ವರ್‌ಗೆ ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು. ಮೀನಿನ ಟೆಂಪೋ ಚಾಲಕರಾಗಿದ್ದ ಅವರು ಕಳೆದ ಕೆಲವು ಸಮಯದಿಂದ ಕೆಲಸವಿಲ್ಲದೆ ಮನೆಯಲ್ಲಿದ್ದರು.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.