ಮೂಡುಬಿದಿರೆ: ಕಡಂದಲೆಯ ತೊಂದಡ್ಪು ಶ್ರೀ ಗುರುನಿತ್ಯಾನಂದ ಸ್ವಾಮಿ ಭಜನಾ ಮಂದಿರವು ತನ್ನ 59ನೇ ವಾರ್ಷಿಕ ಭಜನಾ ಮಂಗಲೋತ್ಸವವನ್ನು ಏಪ್ರಿಲ್ 23ರಂದು ಆಚರಿಸಲಾಗುತ್ತದೆ. ಆ ದಿನ ಬೆಳಿಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ, ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು ಮಹಾಪೂಜೆಯನ್ನು ನೆರವೇರಿಸಲಾಗುತ್ತದೆ. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 7 ಗಂಟೆಯಿಂದ ಭಜನಾ ಮಂಗಲೋತ್ಸವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ಈ ವೇಳೆ ವಿವಿಧ ಭಜನಾ ಮಂಡಳಿಗಳು ಭಾಗವಹಿಸಿ ಭಜನಾ ಸೇವೆಯನ್ನು ಸಲ್ಲಿಸಲಿವೆ. ಸಂಜೆ 7ರಿಂದ 8ರವರೆಗೆ ಆದಿಶಕ್ತಿ ಭಜನಾ ಮಂಡಳಿ ಉಳುವೆ 8ರಿಂದ 9ರವರೆಗೆ ಯಕ್ಷ ಭಜನಾ ಮಂಡಳಿ ಜನತಾನಗರ, ಕಡಂದಲೆ, 9ರಿಂದ 10ರವರೆಗೆ ಬ್ರಹ್ಮಶ್ರೀ ಗುರುನಾರಾಯಣ ಭಜನಾ ಮಂಡಳಿ, ಪೂಪಾಡಿಕಲ್ಲು ಕಡಂದಲೆ, 10ರಿಂದ 11ರವರೆಗೆ ಸೋಮನಾಥೇಶ್ವರ ಭಜನಾ ಮಂಡಳಿ ವರ್ಣಬೆಟ್ಟು, ಪಾಲಡ್ಕ, 11ರಿಂದ 12ರವರೆಗೆ ಶ್ರೀ ಲಕ್ಷ್ಮೀ ವೆಂಕಟೇಶ ಭಜನಾ ಮಂಡಳಿ ಸಚ್ಚೆರಿಪೇಟೆ ಹಾಗೂ 12ರಿಂದ 1ರವರೆಗೆ ಶ್ರೀ ಗುರು ನಿತ್ಯಾನಂದ ಸ್ವಾಮಿ ಭಜನಾ ಮಂಡಳಿ, ತೊಂದಡ್ಪು, ತಂಡದವರು ಭಜನೆ ಪ್ರಸ್ತುತಪಡಿಸಲಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ತೊಂಡಡ್ಡು ಶ್ರೀ ಗುರುನಿತ್ಯಾನಂದ ಸ್ವಾಮಿ ಭಜನಾ ಮಂದಿರದ ಆಡಳಿತ ಮಂಡಳಿಯವರು ವಿನಂತಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.