ಮೂಡುಬಿದಿರೆ: ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 3ರಂದು ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಜೆ ಘೋಷಿಸಿದೆ.

ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ , ಮೂಡುಬಿದಿರೆ, ಮೂಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10ನೇ ತರಗತಿವರೆಗೆ) ಹಾಗೂ ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಅಂಗನವಾಡಿ, ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಅನ್ವಯವಾಗಲಿದೆ.