ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮೂಡುಬಿದಿರೆ ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ, ಮೂಡುಬಿದಿರೆ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯು ಬುಧವಾರ ಸಮಾಜ ಮಂದಿರದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಉದ್ಘಾಟಿಸಿದರು. ಸುಭಾಶ್ಚಂದ್ರ ಚೌಟ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಈ ಸಾಲಿನ ಕ್ರಿಯಾಯೋಜನೆ ಕುರಿತು ಚರ್ಚೆ ನಡೆಸಲಾಯಿತು. ಇದೇ ವೇಳೆ ಪದಾಧಿಕಾರಿಗಳ ಬದಲಾವಣೆ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ವಾಸುದೇವ ನಾಯಕ್ ಅವರನ್ನು ಆಯ್ಕೆ ಮಾಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಡಿ. ದಿನೇಶ್ ಅವರು ಮಾರ್ಗದರ್ಶನ ನೀಡಿದರು. ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕು ಯೋಜನಾಧಿಕಾರಿ ಧನಂಜಯ ಬಿ. ಅವರು ಸ್ವಾಗತಿಸಿ, ಗತ ಸಭೆಯ ವರದಿಯನ್ನು ಮಂಡಿಸಿದರು. ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ್ ಅವರು ಭಾಗವಹಿಸಿ, ಯಶಸ್ವಿ ಕಾರ್ಯಕ್ರಮ ಸಂಯೋಜನೆ ಕುರಿತು ಮಾಹಿತಿ ನೀಡಿದರು. ತಾಲೂಕಿನ ಎಲ್ಲಾ ಜನಜಾಗೃತಿ ಸದಸ್ಯರು, ಮೇಲ್ವಿಚಾರಕರ ಶ್ರೇಣಿ ಸಿಬ್ಬಂದಿಗಳು ಹಾಗೂ ವೇದಿಕೆಯ ಮೇಲ್ವಿಚಾರಕರು ಸಭೆಯಲ್ಲಿ ಭಾಗವಹಿಸಿದರು.
ಮೂಡುಬಿದಿರೆ: ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ
ಮೂಡುಬಿದಿರೆ: ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ