ಮಂಗಳೂರು : ಅಲೈಯನ್ಸ್ ಪಿಯು ಕಾಲೇಜು 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದೆ.
ವ್ಯವಹಾರ ಅಧ್ಯಯನ ವಿಷಯದಲ್ಲಿ ಶಿವಂ ಪಿ., ನೀರಜಾ ಪಿ.ಆರ್., ಮತ್ತು ವಿಶಾಲಾಕ್ಷಿ ಎಸ್. ಅವರು 100ಕ್ಕೆ 100 ಅಂಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ಇದರೊಂದಿಗೆ, ಶಿವಂ ಪಿ. ಅವರು ಹಿಂದಿ ವಿಷಯದಲ್ಲಿಯೂ ಪೂರ್ಣ ಅಂಕಗಳನ್ನು ಪಡೆದು ತಮ್ಮ ಶೈಕ್ಷಣಿಕ ಪ್ರೌಢಿಮೆಯನ್ನು ಸಾಬೀತುಪಡಿಸಿದ್ದಾರೆ.
ಸಂಸ್ಥೆಯ ಶೈಕ್ಷಣಿಕ ಮಟ್ಟವನ್ನು ಪ್ರತಿಬಿಂಬಿಸುವ ಈ ಫಲಿತಾಂಶದಲ್ಲಿ ಒಟ್ಟು 18 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 32 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್‌ನಲ್ಲಿ ತೇರ್ಗಡೆಯಾಗಿದ್ದಾರೆ. ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ, ಸಂಖ್ಯಾಶಾಸ್ತ್ರ, ವ್ಯವಹಾರ ಅಧ್ಯಯನ, ಅರ್ಥಶಾಸ್ತ್ರ, ಇಂಗ್ಲಿಷ್ ಮತ್ತು ಹಿಂದಿ ಸೇರಿದಂತೆ ಎಲ್ಲಾ ಪ್ರಮುಖ ವಿಷಯಗಳಲ್ಲಿ ವಿದ್ಯಾರ್ಥಿಗಳು ಶೇ. 100ರಷ್ಟು ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಪರಿಶ್ರಮ, ಅಧ್ಯಾಪಕರ ಮಾರ್ಗದರ್ಶನ ಹಾಗೂ ಸಂಸ್ಥೆಯ ಶೈಕ್ಷಣಿಕ ಬದ್ಧತೆ ಈ ಯಶಸ್ಸಿಗೆ ಮೂಲ ಕಾರಣವಾಗಿದೆ. ವಿದ್ಯಾರ್ಥಿಗಳ ಈ ವಿಶಿಷ್ಟ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದ್ದಾರೆ.