ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರ ಮೇಳದ ಉದ್ಘಾಟನೆ ಭಾನುವಾರ ಕನ್ನಡ ಭವನದಲ್ಲಿ ಜರುಗಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಶಿಬಿರ ಉದ್ಘಾಟಿಸಿ, ಜೀವನದಲ್ಲಿ ಲವಲವಿಕೆ ಮತ್ತು ಸಮಯಪ್ರಜ್ಞೆ ಅತ್ಯಂತ ಮುಖ್ಯವೆಂದು ತಿಳಿಸಿದರು. ಡಾ. ಜೀವನ್ ರಾಂ ಸುಳ್ಯ ಅವರ ನಿರ್ದೇಶನದಲ್ಲಿ ನಡೆಯುತ್ತಿರುವ ಈ ರೀತಿಯ ಶಿಬಿರಗಳು ಮಕ್ಕಳ ಸಮಗ್ರ ಅಭಿವೃದ್ಧಿಗೆ ಬಹಳ ಉಪಯೋಗಕಾರಿಯಾಗಿವೆ. ಕ್ಲಾಸ್‌ರೂಮ್ ಶಿಕ್ಷಣದ ಜೊತೆಗೆ ಬಯಲು ಶಾಲೆಯ ಕಲಿಕೆ ಜೀವನದಲ್ಲಿ ಬಹಳ ಮುಖ್ಯ. ಇಂತಹ ಶಿಬಿರಗಳ ಮೂಲಕ ಕೂಡು ಕುಟುಂಬದ ಮಹತ್ವ ಮಕ್ಕಳಿಗೆ ತಿಳಿಯುತ್ತದೆ ಎಂದರು.
ಸಿ.ಎ. ಉಮೇಶ್ ರಾವ್ ಮಿಜಾರ್ ಮಾತನಾಡಿ, ಜೀವನದಲ್ಲಿ ಅಂಕಗಳು ಮಾತ್ರ ಮುಖ್ಯವಲ್ಲ. ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆಯೂ ಅಷ್ಟೇ ಅಗತ್ಯ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು. ಡಾ.ಜೀವನ್ ರಾಂ ಸುಳ್ಯ ನಿರೂಪಿಸಿ ವಂದಿಸಿದರು.
ಆಳ್ವಾಸ್ ಸಂಸ್ಥೆಯ ವತಿಯಿಂದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರ ಮೇಳದ ಉದ್ಘಾಟನೆ
ಆಳ್ವಾಸ್ ಸಂಸ್ಥೆಯ ವತಿಯಿಂದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರ ಮೇಳದ ಉದ್ಘಾಟನೆ