ಮೂಡುಬಿದಿರೆ: ಇಲ್ಲಿನ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯು 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 67 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಅದರಲ್ಲಿ 40 ಮಂದಿ ಪ್ರಥಮ ದರ್ಜೆ ಹಾಗೂ 14 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದವರು ಪಾಸ್ ವರ್ಗದಲ್ಲಿ ತೇರ್ಗಡೆಯಾಗಿದ್ದಾರೆ. ಶಾಲೆಯ ಬಿಂದುಶ್ರೀ 550 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಸುದೀಶ್ 542 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಆಕಾಶ್ 541 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ. ಶಾಲೆಯ ಈ ಸಾಧನೆಗೆ ಮುಖ್ಯೋಪಾಧ್ಯಾಯರು, ಶಿಕ್ಷಕರು ಅಭಿನಂದಿಸಿದ್ದಾರೆ.