ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯು ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಪರೀಕ್ಷೆಗೆ ಹಾಜರಾದ 203 ವಿದ್ಯಾರ್ಥಿಗಳೆಲ್ಲರೂ ಉತ್ತೀರ್ಣರಾಗುವುದರ ಮೂಲಕ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು ವಿದ್ಯಾರ್ಥಿಗಳಲ್ಲಿ 151 ಮಂದಿ ಡಿಸ್ಟಿಂಕ್ಷನ್ ಪಡೆದಿದ್ದು, 45 ಮಂದಿ 600ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಚಿನ್ ಡಿ. ನಾಯ್ಕ್ 622/625 (99.54%) ಅಂಕಗಳನ್ನು ಪಡೆದು ರಾಜ್ಯದಲ್ಲಿ 4ನೇ ಸ್ಥಾನ ಪಡೆದಿದ್ದಾರೆ. ನಂತರ ನಕ್ಷತ್ರ (620/625, 6ನೇ ಸ್ಥಾನ), ಅನ್ಮೋಲ್ ಆರ್ ಪಾಟೀಲ್ (618, 8ನೇ ಸ್ಥಾನ), ಗಗನ್ ಪಾಟೀಲ್ (618, 8ನೇ ಸ್ಥಾನ), ದೇವಾನಂದ (618, 8ನೇ ಸ್ಥಾನ), ಪ್ರತೀಕ್ ಸಂರೇಶಿ (617, 9ನೇ ಸ್ಥಾನ), ಹರಿಪ್ರೀತ್ ಪೈ (616, 10ನೇ ಸ್ಥಾನ), ಅಕಾಂಕ್ಷ್ ಜೈನ್ (616, 10ನೇ ಸ್ಥಾನ), ಆರ್ಯನ್ ಕುಮಾರ್ ಹಳ್ಳಿ (616, 10ನೇ ಸ್ಥಾನ), ಸ್ನಿಗ್ಧಾ ಜೈನ್ (615), ಸಿರಿಷಾ (615), ದರ್ಶಿತ್ (615) ಮತ್ತು ಪ್ರಾಂಶು (615) ಉತ್ತಮ ಸಾಧನೆ ಮಾಡಿದ್ದಾರೆ. ಅಧ್ಯಕ್ಷ ಯುವರಾಜ್ ಜೈನ್ ಅವರು ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಸಮರ್ಪಿತ ಸೇವೆ ಹಾಗೂ ಮುಖ್ಯೋಪಾಧ್ಯಾಯರ ಮಾರ್ಗದರ್ಶನದಿಂದ ಸಾಧನೆಗೆ ಪೂರಕವಾಗಿದೆ ಎಂದು ತಿಳಿಸಿದ್ದಾರೆ. ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ವಿದ್ಯಾರ್ಥಿಗಳು, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರನ್ನು ಅಭಿನಂದಿಸಿ, ನಿಯಮಿತ ಅಭ್ಯಾಸ ಮತ್ತು ವರ್ಕ್‌ಶೀಟ್ ಪರಿಹಾರವು ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಯಿತು ಎಂದು ಹೇಳಿದರು. ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.