ಮೂಡುಬಿದಿರೆ: ಇರುವೈಲು ಸಮೀಪದ ಹೊಸಬೆಟ್ಟು ಸರ್ಕಾರಿ ಪ್ರೌಢಶಾಲೆ 2025–26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ. ಶಾಲೆಯ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 7 ಮಂದಿ ಡಿಸ್ಟಿಂಕ್ಷನ್, 4 ಮಂದಿ ಪ್ರಥಮ ಶ್ರೇಣಿ ಹಾಗೂ 4 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ತನ್ವಿ (574), ಸಾನಿಧ್ಯಾ (560), ತನಿಷ್ಕ್ (551), ನೂತನ್ (551), ಸುಜನ್ ಎಸ್. (547), ರಕ್ಷಿತಾ (546) ಮತ್ತು ಕೀರ್ತನ್ (507) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ಗಳಿಸಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸಬೆಟ್ಟು ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ
ಹೊಸಬೆಟ್ಟು ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ