ಮೂಡುಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು ಶೇ. 97.60 ಫಲಿತಾಂಶವನ್ನು ದಾಖಲಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ ಒಟ್ಟು 167 ವಿದ್ಯಾರ್ಥಿಗಳ ಪೈಕಿ 51 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 96 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು ಒಬ್ಬ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ಲೆಫ್ಟಿನೆಂಟ್ ವಿಜಯಲಕ್ಷ್ಮಿ ತಿಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪೂರ್ಣಿಮಾ 97.50, ಸಮೀಕ್ಷಾ ಎಸ್. 94.83 ಹಾಗೂ ಐಶ್ವರ್ಯ 92.5 ಅಂಕಗಳನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕುಸುಮಾ ಡಿ.ಟಿ. ಮತ್ತು ನಿಧಿ ಬೆಡೇಕರ್ ತಲಾ 97.33, ವಿಶಾಲ್ ಬಿ. 96.83, ಪ್ರವೀಣ್ ಪ್ರಕಾಶ್ 96.16 ಅಂಕ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಗೀತಾ 90, ಪರಮೇಶ್ವರಿ ಎಂ.ಎ. 86.54 ಹಾಗೂ ಕೌಶಿಕ್ ಎನ್.ಕೆ. 85 ಅಂಕಗಳನ್ನು ಪಡೆದು ಸಾಧನೆಗೈದಿದ್ದಾರೆ ಎಂದು ಪ್ರಕಟಣೆಯಲ್ಲಿ ಲೆಫ್ಟಿನೆಂಟ್ ವಿಜಯಲಕ್ಷ್ಮಿ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ: ಶ್ರೀ ಮಹಾವೀರ ಕಾಲೇಜಿಗೆ ಶೇ. 97.60 ಫಲಿತಾಂಶ- 51 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 96 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ
ದ್ವಿತೀಯ ಪಿಯುಸಿ: ಶ್ರೀ ಮಹಾವೀರ ಕಾಲೇಜಿಗೆ ಶೇ. 97.60 ಫಲಿತಾಂಶ- 51 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 96 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ