ಮೂಡುಬಿದಿರೆ: ಮಹಾವೀರ ಕಾಲೇಜಿನ ವಜ್ರಮಹೋತ್ಸವ ಸಮಾರಂಭದ ಅಂಗವಾಗಿ ಏಪ್ರಿಲ್ 17 ರಿಂದ 19 ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಶುಕ್ರವಾರ ಸಂಜೆ ಸಮಾಜ ಮಂದಿರದ ಆವರಣದಿಂದ ಕಾಲೇಜಿನವರೆಗೆ ವೈಭವದ ಮೆರವಣಿಗೆ ನಡೆಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಅಭಯಚಂದ್ರ ಜೈನ್ ಹಾಗೂ ಎಂಸಿಎಸ್ ಸೊಸೈಟಿಯ ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ ಎಂ. ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಆಡಳಿತ ಮಂಡಳಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ, ಕಾರ್ಯದರ್ಶಿ ರಮೇಶ್ ಭಟ್ ಹಾಗೂ ಪದಾಧಿಕಾರಿಗಳು ಪಾಲ್ಗೊಂಡರು. ಜೊತೆಗೆ ಹಳೆ ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಾಕ್ಷಿ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನವ್ಯ, ಪದವಿ ಕಾಲೇಜಿನ ಪ್ರಾಂಶುಪಾಲ ರಾಧಾಕೃಷ್ಣ ಶೆಟ್ಟಿ, ಪಪೂ ಕಾಲೇಜಿನ ಪ್ರಾಂಶುಪಾಲ ವಿಜಯಲಕ್ಷ್ಮಿ, ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜಿನ ಆಡಳಿತ ಮಂಡಳಿಗೊಳಪಟ್ಟ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಸಮಾಜ ಮಂದಿರ ಸಭಾದ ಕಾರ್ಯದರ್ಶಿ ಸುರೇಶ್ ಪ್ರಭು, ಪ್ರಮುಖರು ಉಪಸ್ಥಿತರಿದ್ದರು.