ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಮಾರ್ಪಾಡಿಯಲ್ಲಿ ಭಾನುವಾರ ರಾತ್ರಿ ಹತ್ತು ಗಂಟೆ ಸುಮಾರಿಗೆ ಕಾರು ಹಾಗೂ ಮೋಟಾರು ಬೈಕು ಮುಖಾಮುಖಿ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯಗಳಾಗಿವೆ. ಅಪಘಾತಕ್ಕೆ ಕಾರಣವಾದ ಕಾರು ಶಿರ್ತಾಡಿ ಮೂಲದವರಿಗೆ ಸೇರಿದ್ದೆಂದು ತಿಳಿದುಬಂದಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.