ಮೂಡುಬಿದಿರೆ: ವೈಬ್ರೆಂಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧೀನದ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಕಾಲೇಜು ಶೇ. 100 ಫಲಿತಾಂಶ ದಾಖಲಿಸಿದೆ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ 598 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ ಸ್ಥಾನ ಪಡೆದಿರುವ ಧನುಷ್ ಗುತ್ತಿ, ಉತ್ತಮ ಅಂಕಗಳನ್ನು ಗಳಿಸಲು ಕಾಲೇಜಿನ ಕೊಡುಗೆ ಮಹತ್ತರವಾದುದು ಮತ್ತು ಕಾಲೇಜಿನಲ್ಲಿ ನಡೆಯುವ ಗೈಡೆಡ್ ಸ್ಟಡಿ ತರಗತಿಗಳು ತನ್ನ ಸಾಧನೆಗೆ ಪೂರಕವಾಯಿತು ಎಂದು ಅಭಿಪ್ರಾಯಪಟ್ಟರು. 593 ಅಂಕಗಳನ್ನು ಪಡೆದ ಸರಸ್ವತಿ ಎಂ.ಎಸ್, ಉಪನ್ಯಾಸಕರ ಮಾರ್ಗದರ್ಶನ ಮತ್ತು ಕಾಲೇಜಿನ ನಿರ್ದೇಶಕರ ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಯಿತು ಎಂದು ಸಂತಸ ವ್ಯಕ್ತಪಡಿಸಿದರು. 592 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿರುವ ತಸ್ನೀಮ್ ಎಸ್. ಎಂ, ಕಾಲೇಜಿನ ಕಲಿಕಾ ಪರಿಸರ ಮತ್ತು ಉಪನ್ಯಾಸಕರ ನಿರಂತರ ಸಹಕಾರವೇ ತನ್ನ ಯಶಸ್ಸಿಗೆ ಕಾರಣ ಎಂದು ತಿಳಿಸಿದರು. ಕಾಲೇಜಿನ ನಿರ್ದೇಶಕರು, ಬೋಧಕ ಮತ್ತು ಬೋಧಕೇತರ ವೃಂದದವರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.