ಮೂಡುಬಿದಿರೆ: ಎಡಪದವು ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಪ್ರೇಮನಾಥ ಶೆಟ್ಟಿ ಕಾವು ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾದ ಪ್ಯಾರಾ ಅಮೆಚೂರು ಕಬ್ಬಡಿ ಅಸೋಸಿಯೇಷನ್‌ನ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಕ್ರೀಡಾ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಅವರ ದೀರ್ಘಕಾಲದ ಅನುಭವ ಮತ್ತು ಸೇವೆಗೆ ಮನ್ನಣೆಯಾಗಿ ಈ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ. ಪ್ರೇಮನಾಥ ಶೆಟ್ಟಿ ಕಾವು ಅವರು ಪ್ರಸ್ತುತ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ನೌಕರ ಸಂಘದ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರ ಜೊತೆಗೆ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಸಂಯೋಜಕರಾಗಿಯೂ ಅವರು ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದು, ಕ್ರೀಡಾಕೂಟಗಳ ಯಶಸ್ವಿ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಜಿಲ್ಲಾ ಪ್ಯಾರಾ ಅಮೆಚೂರು ಕಬ್ಬಡಿ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿಯಾಗಿ ಪ್ರೇಮನಾಥ ಶೆಟ್ಟಿ ಆಯ್ಕೆ
ಜಿಲ್ಲಾ ಪ್ಯಾರಾ ಅಮೆಚೂರು ಕಬ್ಬಡಿ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿಯಾಗಿ ಪ್ರೇಮನಾಥ ಶೆಟ್ಟಿ ಆಯ್ಕೆ