ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ ಬೆದ್ರ ಉತ್ಸವದ ಎರಡನೇ ದಿನವಾದ ಶನಿವಾರ ತುಳುವಿನ ಖ್ಯಾತ ವ್ಲಾಗರ್ ಮತ್ತು ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಆಗಮಿಸಿ ಪ್ರೇಕ್ಷಕರನ್ನು ರಂಜಿಸಿದರು.
ಮೂಡುಬಿದಿರೆಗೆ ಭೇಟಿ ನೀಡಿದ ರಕ್ಷಿತಾ ಶೆಟ್ಟಿ ಅವರನ್ನು ಅಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದರು. ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿ ನೆರೆದಿದ್ದ ಬೃಹತ್ ಜನಸ್ತೋಮವನ್ನು ಕಂಡು ನಟಿ ಮೆಚ್ಚುಗೆ ವ್ಯಕ್ತಪಡಿಸಿದರು. ನಿಮ್ಮೆಲ್ಲರ ಪ್ರೀತಿಯೇ ನನ್ನ ಶಕ್ತಿ ಎಂದು ಈ ಸಂದರ್ಭದಲ್ಲಿ ನುಡಿದರು. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ ಜನ ನೀಡಿದ ಬೆಂಬಲವನ್ನು ಸ್ಮರಿಸಿದ ಅವರು, ಇಂದು ತಾವು ಈ ಮಟ್ಟಕ್ಕೆ ಬೆಳೆಯಲು ಜನರ ಆಶೀರ್ವಾದವೇ ಕಾರಣ ಎಂದರು. ಮೂಡುಬಿದಿರೆಗೆ ಇದು ತಮ್ಮ ಎರಡನೇ ಭೇಟಿಯಾಗಿದ್ದು, ಇಲ್ಲಿನ ಜನರ ಪ್ರೀತಿ ಮನಸ್ಸಿಗೆ ಸಂತೋಷ ನೀಡಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಬಿಗ್ ಬಾಸ್ ಮನೆಯನ್ನು ಮಿಸ್ ಮಾಡಿಕೊಳ್ಳುತ್ತಿದ್ದು, ಅಲ್ಲಿ ಕಳೆದ ದಿನಗಳು ನೆನಪಾಗುತ್ತಿವೆ ಎಂದು ಭಾವುಕರಾದರು. ಇದೇ ವೇಳೆ ಅಭಿಮಾನಿಗಳ ಸಮ್ಮುಖದಲ್ಲಿ ಹಾಡೊಂದನ್ನು ಹಾಡಿ ರಂಜಿಸಿದರು. ಡ್ಯಾನ್ಸ್ ಮಾಡಿ ಮತ್ತಷ್ಟು ಮೆರಗು ನೀಡಿದರು.