ಮೂಡುಬಿದಿರೆ: ಎಸ್.ಎಂ.ಎಸ್.ಪಿ. ಸಂಸ್ಕೃತ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಸುಮಂತ್ ಭಟ್ ಜ್ಯೋತಿಷ್ಯ ಶಾಸ್ತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದು, ಅವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವರ್ಣಪದಕ ಪುರಸ್ಕಾರ ಲಭಿಸಿದೆ.

ಮೂಡುಬಿದಿರೆ ಅಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಎಂ. ಸುಬ್ರಹ್ಮಣ್ಯ ಭಟ್ ಮತ್ತು ಸುಜಾತಾ ಭಟ್ ದಂಪತಿಯ ಪುತ್ರ ಸುಮಂತ್ ಭಟ್ 2023-24ನೇ ಸಾಲಿನ ಶಾಸ್ತ್ರಿ (ಬಿ.ಎ) ವಿಭಾಗದಲ್ಲಿ ಅತೀ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ನಡೆದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 12 ಮತ್ತು 13ನೇ ದೀಕ್ಷಾಂತ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋತ್ ಸುಮಂತ್ ಭಟ್ ಅವರಿಗೆ ಪದಕ ಪ್ರದಾನ ಮಾಡಿದರು.