ಮೂಡುಬಿದಿರೆ: ತಾಲೂಕು ಆಡಳಿತದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಾಯಿತು. ತಾಲೂಕು ತಹಸೀಲ್ದಾರ್ ಶ್ರೀಧರ ಮುಂದಲಮನಿ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ದೀಪ ಬೆಳಗಿ ಪುಷ್ಪಾರ್ಚನೆಗೈದರು. ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದು, ಸಂವಿಧಾನ ಶಿಲ್ಪಿಯ ಆದರ್ಶಗಳನ್ನು ಸ್ಮರಿಸಿದರು.