ಶಿಕ್ಷಣ

53 ಲೇಖನಗಳು

'ಖೇಲ್ ಧವಳಾ’- ಗ್ರಾಮೀಣ ಕ್ರೀಡಾಕೂಟ :ಧವಳಾ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಬೆಳುವಾಯಿಯಲ್ಲಿ ಆಗಸ್ಟ್ 22ರಂದು ‘ಕೆಸರಲ್ಲೊಂದು ದಿನ 2026’

ಮೂಡುಬಿದಿರೆ: ದಿಗಂಬರ ಜೈನ ವಿದ್ಯಾವರ್ಧಕ ಸಂಘ ಆಡಳಿತಕ್ಕೊಳಪಟ್ಟ ಶ್ರೀ ಧವಳಾ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ‘ಖೇಲ್ ಧವಳಾ’ ಗ್ರಾಮೀಣ ಕ್ರೀಡಾಕೂಟ ‘ಕೆಸರಲ್ಲೊಂದು ದಿನ – 2026’ ಆಗಸ್ಟ್ 22ರಂದು ಬೆಳುವಾಯಿಯಲ್ಲಿ ಆಯೋಜಿಸಲಾಗಿದೆ.

ಮೂಡುಬಿದಿರೆ ಗಾಂಧಿನಗರ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ಗಾಂಧಿನಗರದ ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ವಿಜಯ ಶೆಟ್ಟಿ ಅಜಾರುಗುತ್ತು ಕಟೀಲು ಧ್ವಜಾರೋಹಣ ನೆರವೇರಿಸಿದರು.

ಕಲ್ಯಾಣಪುರ ತ್ರಿಶಾ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ-‘ಕ್ರಿಯೇಟಿವ್ ಸವಿಗಾನ’

ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಸ್ವಾತಂತ್ರ್ಯವು ಹಕ್ಕಿನ ಜತೆಗೆ ಜವಾಬ್ದಾರಿಯೂ ಆಗಿದ್ದು, ಹಿರಿಯರ ತ್ಯಾಗ ಬಲಿದಾನದಿಂದ ದೊರೆತ ಸ್ವಾತಂತ್ರ್ಯವನ್ನು ಸದ್ಬಳಕೆ ಮಾಡಿಕೊಂಡು ದೇಶದ ಪ್ರಗತಿಗೆ ಸಹಕರಿಸಬೇಕು ಎಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಡಾ. ಗಣನಾಥ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ: ಯುವಜನತೆ ದೇಶದ ಪ್ರಗತಿಗೆ ಕೊಡುಗೆ ನೀಡಬೇಕು- ಸದಾಶಿವ ಪ್ರಭು

ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮಾಜಿ ಸೈನಿಕ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಸದಾಶಿವ ಪ್ರಭು ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಎಕ್ಸಲೆಂಟ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಎನ್‌ಸಿಇಆರ್‌ಟಿ ಸಿಇಇಯಲ್ಲಿ ರ‍್ಯಾಂಕ್ ಪಡೆದ ಮೌಲ್ಯ ಆರ್. ಜೈನ್‌, ಎನ್.ಸಿ.ಸಿಯಲ್ಲಿ ಸಾಧನೆ ಮಾಡಿದ ತಸ್ಲೀಂಗೆ ಗೌರವ

ಮೂಡುಬಿದಿರೆ: ಭಾರತವು ವಿಶ್ವದ ಎಲ್ಲ ರಾಷ್ಟ್ರಗಳಿಗೂ ಮಾರ್ಗದರ್ಶಕವಾಗಿರುವ ಶ್ರೇಷ್ಠ ದೇಶ. ದೇಶದ ಹಿರಿಮೆ, ಸಂಸ್ಕೃತಿ ಹಾಗೂ ಪರಂಪರೆಯ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಬೇಕು ಎಂದು ಮುಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಶಿರ್ತಾಡಿಯಲ್ಲಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ, ಹೋಲಿ ಏಂಜಲ್ಸ್ ಕನ್ನಡ ಮಾಧ್ಯಮ ಶಾಲೆಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ದೇಶಪ್ರೇಮವೆಂದರೆ ಕೇವಲ ದೇಶವನ್ನು ಪ್ರೀತಿಸುವುದಲ್ಲ; ದೇಶದ ಗೌರವ, ಏಕತೆ ಮತ್ತು ಭವಿಷ್ಯವನ್ನು ಕಾಪಾಡುವ ಜವಾಬ್ದಾರಿಯೂ ಹೌದು ಎಂಬ ಸಂದೇಶದೊಂದಿಗೆ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಹೋಲಿ ಏಂಜಲ್ಸ್ ಕನ್ನಡ ಮಾಧ್ಯಮ ಶಾಲೆ, ಶಿರ್ತಾಡಿ ಇವರ ಸಹಭಾಗಿತ್ವದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಆಚರಿಸಲಾಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 80ನೇ ಸ್ವಾತಂತ್ರ್ಯ ದಿನಾಚರಣೆ; 15 ಸಾವಿರಕ್ಕೂ ಅಧಿಕ ಮಂದಿ ಭಾಗಿ-2,550 ವಿದ್ಯಾರ್ಥಿಗಳಿಂದ ರಾಷ್ಟ್ರಧ್ವಜದ ವಿನ್ಯಾಸ

ಮೂಡುಬಿದಿರೆ: ಸ್ವಾತಂತ್ರ್ಯವೆಂದರೆ ನಮಗೆ ಇಷ್ಟ ಬಂದಂತೆ ಬದುಕುವ ಹಕ್ಕು ಮಾತ್ರವಲ್ಲ; ದೇಶ, ಸಂವಿಧಾನ, ಸಮಾಜ ಹಾಗೂ ಭವಿಷ್ಯದ ಪೀಳಿಗೆಯೆಡೆಗೆ ಕರ್ತವ್ಯ ಮತ್ತು ಜವಾಬ್ದಾರಿಯನ್ನೂ ಒಳಗೊಂಡಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ನಿವೃತ್ತ ಭಾರತೀಯ ಸೇನಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಶನಿವಾರ ಕೆ.ವಿ. ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ವೈಬ್ರೆಂಟ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ: ಶ್ರೇಷ್ಠ ಸಂಪ್ರದಾಯ, ಸಂಸ್ಕೃತಿಯಿಂದ ಭಾರತ ಶ್ರೀಮಂತ ರಾಷ್ಟ್ರ- ಸಿಎ ಎಸ್.ಎಸ್. ನಾಯಕ್

ಮೂಡುಬಿದಿರೆ: ಕಲ್ಲಬೆಟ್ಟುವಿನ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರಿನ ನಮ್ಮ ಕುಡ್ಲ ಬಿಸಿನೆಸ್ ಟಾನಿಕ್‌ನ ಮುಖ್ಯ ಸಂಪಾದಕ ಹಾಗೂ ನವದೆಹಲಿಯ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಮಾಸ್ಟರ್ ಟ್ರೈನರ್ ಸಿಎ ಎಸ್.ಎಸ್. ನಾಯಕ್ ಧ್ವಜಾರೋಹಣ ನೆರವೇರಿಸಿದರು.

ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಯುವಶಕ್ತಿಯ ಸದ್ಬಳಕೆಯಿಂದ ನವಭಾರತ ನಿರ್ಮಾಣ- ಅಭಯಚಂದ್ರ ಜೈನ್

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

ತ್ಯಾಗ-ಬಲಿದಾನ ಸ್ಮರಣೆಯೊಂದಿಗೆ ಬ್ರೈಟ್ ಹೊರೈಝನ್‌ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ

ಮೂಡುಬಿದಿರೆ: ಕರಿಮಣೇಲಿನ ಬ್ರೈಟ್ ಹೊರೈಝನ್ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.

ರೋಟರಿ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಸ್ವಾತಂತ್ರ್ಯ ಹಕ್ಕಿನ ಜತೆಗೆ ಜವಾಬ್ದಾರಿ-ಡಾ. ಆಶೀರ್ವಾದ್ ಎಂ.ಪಿ.

ಮೂಡುಬಿದಿರೆ: ರೋಟರಿ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಮರಾವತಿ ಸಭಾಭವನದಲ್ಲಿ ಆಚರಿಸಲಾಯಿತು. ರೋಟರಿ ಕ್ಲಬ್ ಮೂಡುಬಿದಿರೆಯ ಅಧ್ಯಕ್ಷ ಡಾ. ಆಶೀರ್ವಾದ್ ಎಂ.ಪಿ. ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

NCERT CEE ಪರೀಕ್ಷೆಯಲ್ಲಿ ಎಕ್ಸಲೆಂಟ್‌ನ ಮೌಲ್ಯ ಜೈನ್‌ಗೆ ಅಖಿಲ ಭಾರತ 25ನೇ ರ್‍ಯಾಂಕ್

ಮೂಡುಬಿದಿರೆ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ (NCERT) ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (CEE–2026)ಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿನಿ ಮೌಲ್ಯ ವೈ.ಆರ್. ಜೈನ್ ಅಖಿಲ ಭಾರತ ಮಟ್ಟದಲ್ಲಿ 25ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.

ಎಕ್ಸಲೆಂಟ್ ಪಿಯು ಕಾಲೇಜಿನಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್‌, ರೆಡ್‌ಕ್ರಾಸ್‌, ರೋವರ್ಸ್‌-ರೇಂಜರ್ಸ್‌, ಸಾಹಿತ್ಯ ಸಂಘ, ಇಕೋ ಕ್ಲಬ್‌ಗಳ ಉದ್ಘಾಟನೆ

ಮೂಡುಬಿದಿರೆ: ವಿದ್ಯಾರ್ಥಿಗಳ ಬದುಕಿಗೆ ಮೌಲ್ಯಗಳೇ ನಿಜವಾದ ಮೈಲುಗಲ್ಲುಗಳಾಗಬೇಕು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ವಿವೇಕ ಆಳ್ವ ಹೇಳಿದರು.

ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ: ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗಸಂಸ್ಥೆಯಾದ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ಗೆ ತುಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಕೋಟಾದಡಿ ಅನುಮೋದನೆ ದೊರೆತಿದೆ. 2026–27ನೇ ಶೈಕ್ಷಣಿಕ ವರ್ಷಕ್ಕೆ ಒಟ್ಟು 150 ಎಮ್‌ಬಿಬಿಎಸ್ ಸೀಟುಗಳಿಗೆ ಮಂಜೂರಾತಿ ದೊರೆತಿದ್ದು, ಈ ಪೈಕಿ 54 ಸೀಟುಗಳು ತುಳು ಭಾಷಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.

ಆಳ್ವಾಸ್ ಪ್ರಗತಿ–2026: 2,394 ಮಂದಿಗೆ ಉದ್ಯೋಗ; 5,935 ಅಭ್ಯರ್ಥಿಗಳು ಶಾರ್ಟ್‌ಲಿಸ್ಟ್

ಮೂಡುಬಿದಿರೆ: ಆಳ್ವಾಸ್ ಪ್ರಗತಿ–2026ರ 16ನೇ ಆವೃತ್ತಿಯ ಎರಡು ದಿನಗಳ ಉದ್ಯೋಗ ಮೇಳದಲ್ಲಿ 2,394 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗಾವಕಾಶ ದೊರೆತಿದ್ದು, 5,935 ಅಭ್ಯರ್ಥಿಗಳನ್ನು ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಗೆ ಶಾರ್ಟ್‌ಲಿಸ್ಟ್ ಮಾಡಲಾಗಿದೆ.

ಆಳ್ವಾಸ್ ಉದ್ಯೋಗ ಮೇಳಕ್ಕೆ ಚಾಲನೆ : ಎಐ ಕಲಿಯದಿದ್ದರೆ ಭವಿಷ್ಯದಲ್ಲಿ ಉದ್ಯೋಗ ಸಂಕಷ್ಟ: ಯು.ಟಿ. ಖಾದರ್

ಮೂಡುಬಿದಿರೆ: ಎಐ ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಲಿಯಬೇಕು. ಎಐ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರಿಂದ ಶಿಕ್ಷಣ ಸಂಸ್ಥೆಗಳು ಎಐ ಶಿಕ್ಷಣಕ್ಕೂ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಮುಂದಿನ ಹತ್ತು ವರ್ಷಗಳಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಗಂಭೀರ ಸವಾಲುಗಳು ಎದುರಾಗಬಹುದು ಎಂದು ಸಚಿವ ಯು.ಟಿ. ಖಾದರ್ ಹೇಳಿದರು.

ಬಿಕಾಂ ಪರೀಕ್ಷೆಯಲ್ಲಿ 629 ಅಂಕ: ಹೊಸಬೆಟ್ಟುವಿನ ಶ್ರವಣ್‌ಗೆ ಗಮನಾರ್ಹ ಸಾಧನೆ

ಮೂಡುಬಿದಿರೆ: 2025–26ನೇ ಶೈಕ್ಷಣಿಕ ವರ್ಷದ ಬಿಕಾಂ ಆರನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಇಲ್ಲಿನ ಶ್ರೀ ಮಹಾವೀರ ಕಾಲೇಜಿನ ವಿದ್ಯಾರ್ಥಿ ಹೊಸಬೆಟ್ಟುವಿನ ಶ್ರವಣ್ 650 ಅಂಕಗಳಿಗೆ 629 ಅಂಕ (ಶೇ. 96.77) ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಎಕ್ಸಲೆಂಟ್ ನೀಟ್ ಸಾಧಕರಿಗೆ ಸನ್ಮಾನ : ಎಕ್ಸಲೆಂಟ್ ಸಂಸ್ಥೆಯಲ್ಲಿ ಸಾಮಾನ್ಯ ವಿದ್ಯಾರ್ಥಿಯನ್ನೂ ರಾಷ್ಟ್ರೀಯ ಸಾಧಕನನ್ನಾಗಿ ರೂಪಿಸುವ ಶಿಕ್ಷಣ-ಯುವರಾಜ್ ಜೈನ್

ಮೂಡುಬಿದಿರೆ: ವಿದ್ಯಾರ್ಥಿಯ ಸಾಮರ್ಥ್ಯವನ್ನು ಕೇವಲ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ ಅಳೆಯಲು ಸಾಧ್ಯವಿಲ್ಲ. ಸೂಕ್ತ ಮಾರ್ಗದರ್ಶನ, ಶಿಸ್ತುಬದ್ಧ ಶಿಕ್ಷಣ ವ್ಯವಸ್ಥೆ ಮತ್ತು ನಿರಂತರ ಪ್ರೋತ್ಸಾಹ ದೊರೆತರೆ ಸಾಮಾನ್ಯ ವಿದ್ಯಾರ್ಥಿಯೂ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹೇಳಿದರು.

ಎಕ್ಸಲೆಂಟ್ ವಿದ್ಯಾ ಸಂಸ್ಥೆಯಿಂದ ಪರಿಸರ ಸಂರಕ್ಷಣೆಗೆ ಆಧ್ಯಾತ್ಮಿಕ ಸ್ಪರ್ಶ: ಶ್ರೀ ಕ್ಷೇತ್ರ ಕರಿಂಜೆ ‘ಸಸ್ಯ ಶ್ಯಾಮಲಾ–2026’ ಅಭಿಯಾನ

ಮೂಡುಬಿದಿರೆ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ವತಿಯಿಂದ ಪರಿಸರ ಪ್ರೇಮಿ ರಸಕಾ ಜೈನ್ ಅವರ ಸ್ಮರಣಾರ್ಥ ಆಯೋಜಿಸಲಾದ ‘ಸಸ್ಯ ಶ್ಯಾಮಲಾ–2026’ ಸಾವಿರ ಗಿಡಗಳನ್ನು ನೆಡುವ ಹಾಗೂ ಹಂಚುವ ಹಸಿರು ಅಭಿಯಾನದ ಅಂಗವಾಗಿ ಕರಿಂಜೆ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಸಸಿ ನೆಡುವ ಹಾಗೂ ಉಚಿತ ಸಸಿ ವಿತರಣಾ ಕಾರ್ಯಕ್ರಮ ನಡೆಯಿತು.

ನೀಟ್: ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ: ಅಕ್ಷಯ್ ಡಿ.ಗೆ 672 ಅಂಕ

ಮೂಡುಬಿದಿರೆ: ನೀಟ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ

NEET: ಮೂಡುಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ಭರ್ಜರಿ ಸಾಧನೆ; ನಿಖಿಲ್ ಎಸ್.ಎಸ್.ಗೆ 650 ಅಂಕ

ಮೂಡುಬಿದಿರೆ: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್–2026) ಫಲಿತಾಂಶದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮೆರೆದಿದ್ದು, ಮತ್ತೊಮ್ಮೆ ಸಂಸ್ಥೆಯ ಶೈಕ್ಷಣಿಕ ಗುಣಮಟ್ಟವನ್ನು ಸಾಬೀತುಪಡಿಸಿದ್ದಾರೆ.

ನೀಟ್: ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ: 450ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟಿನ ನಿರೀಕ್ಷೆ

ಮೂಡುಬಿದಿರೆ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ 2026 ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮೆರೆದಿದ್ದಾರೆ.

ಜುಲೈ 18ರಂದು ಮೂಡುಬಿದಿರೆಯಲ್ಲಿ 'ಧವಳ ಡೆಸ್ಟಿನಿ-26'-ಮೆಗಾ ಕ್ಯಾಂಪಸ್ ಪ್ಲೇಸ್‌ಮೆಂಟ್ ಡ್ರೈವ್-ಜಿ-ಟೆಕ್ ಕಂಪ್ಯೂಟರ್, ಮುಕ್ತಾ ಸಹಯೋಗ

ಮೂಡುಬಿದಿರೆ: ಧವಳ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ವಾಣಿಜ್ಯ ಶಿಕ್ಷಕರ ಸಂಘ (ಮುಕ್ತಾ) ಹಾಗೂ ಜಿ-ಟೆಕ್ ಕಂಪ್ಯೂಟರ್ ಎಜುಕೇಶನ್, ಮೂಡುಬಿದಿರೆ ಇವರ ಜಂಟಿ ಆಶ್ರಯದಲ್ಲಿ ಜುಲೈ 18ರಂದು 'ಧವಳ ಡೆಸ್ಟಿನಿ-26' ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ಎನ್‌ಎಂಸಿ ಅಧಿಕೃತ ಅನುಮತಿ: 150 ಎಂಬಿಬಿಎಸ್ ಸೀಟುಗಳಿಗೆ ಅವಕಾಶ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷೆಯ ವೈದ್ಯಕೀಯ ಶಿಕ್ಷಣ ಯೋಜನೆಗೆ ಮಹತ್ವದ ಮೈಲಿಗಲ್ಲು ದೊರೆತಿದ್ದು, ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) 2026–27ನೇ ಶೈಕ್ಷಣಿಕ ಸಾಲಿನಿಂದ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರಕ್ಕೆ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಅಧಿಕೃತ ಅನುಮೋದನೆ ನೀಡಿದೆ.